ಬೈಲಹೊಂಗಲ: ವೀರರಾಣಿ ಕಿತ್ತೂರು ಚನ್ನಮ್ಮನ 200ನೇ ವಿಜಯೋತ್ಸವದ ವರ್ಷಾಚರಣೆ ಸವಿ ನೆನಪಿಗಾಗಿ ಅ.28ರಂದು ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ಪ್ರಥಮ ಬೈಲಹೊಂಗಲ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದೆ.
ಪಟ್ಟಣದ ಕಲ್ಮಠ ಗಲ್ಲಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಐತಿಹಾಸಿಕ ಸಮಾಧಿ ಸ್ಥಳದಲ್ಲಿ ಸರ್ಕಾರದಿಂದ ಉತ್ಸವ ನಡೆಸುವಂತೆ ವೀರರಾಣಿ ಕಿತ್ತೂರು ಚನ್ನಮ್ಮ ಸ್ಮರಣೋತ್ಸವ ಸಮಿತಿ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿ ಉತ್ಸವಕ್ಕೆ ಅನುಮತಿ ನೀಡಿರುವ ಸರ್ಕಾರ ಉತ್ಸವಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಿದೆ.
Laxmi News 24×7