Breaking News

ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

Spread the love

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ.

ಕುಡಿದ ಮತ್ತಿನಲ್ಲಿ ಕಂಡಕ್ಟರ್ ಶಿವಕುಮಾರ್ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಸಣ್ಣ ವಿಚಾರಕ್ಕೆ ಬಸ್ ಚಾಲಕ ಗಗನ್ ಮತ್ತು ಸವಾರನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸವಾರನಿಗೆ ಬಿಎಂಟಿಸಿ ಕಂಡಕ್ಟರ್ ಶಿವಕುಮಾರ್ ಬೈದಾಡಿದ್ದಾರೆ.

 

ಇದನ್ನು ಕೇಳಿಸಿಕೊಂಡ ಕಿಡಿಗೇಡಿಗಳು ಬಸ್ ಅಡ್ಡಗಟ್ಟಿ ಕಂಡಕ್ಟರ್ ನನ್ನು ರಸ್ತೆಗೆ ಎಳೆದು ಹಲ್ಲೆ ನಡೆಸಿದ್ದಾರೆ. ಯಲಹಂಕದಿಂದ ಶಿವಾಜಿನಗರಕ್ಕೆ ತೆರಳುತ್ತಿದ್ದ ಎಲೆಕ್ಟ್ರಿಕ್ ಬಸ್ ಕಂಡಕ್ಟರ್ ಶಿವಕುಮಾರ್ ಎದೆ, ಮುಖ, ಕತ್ತು, ಸೊಂಟದ ಭಾಗಕ್ಕೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಸದ್ಯ ಕಂಡಕ್ಟರ್ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ