ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣದ (Muda Case) ತನಿಖೆಯನ್ನು ಚುರುಕುಗೊಳಿಸಿರುವ ಲೋಕಾಯುಕ್ತ ಪೊಲೀಸರು ಪ್ರಕರಣದ ಎ1 ಆರೋಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಅವರಿಗೆ ಶೀಘ್ರದಲ್ಲೇ ನೋಟಿಸ್ ನೀಡಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.
ಈಗಾಗಲೇ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಮೂವರು ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ಅಧಿಕಾರಿಗಳು ಮುಕ್ತಾಯಗೊಳಿಸಿದ್ದಾರೆ.
ಹಾಗಾಗಿ 1ನೇ ಆರೋಪಿ ಸಿದ್ದರಾಮಯ್ಯ ಅವರನ್ನು ಯಾವಾಗ ವಿಚಾರಣೆಗೆ ಒಳಪಡಿಸುತ್ತಾರೆಂಬ ಪ್ರಶ್ನೆ ಇದೆ.
ಶುಕ್ರವಾರವಷ್ಟೇ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿಚಾರಣೆ ನಡೆಸಿರುವ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ದೀಪಾವಳಿ ಬಳಿಕ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
Laxmi News 24×7