ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಹಾಗೂ ಮಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅ.28 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಬೆಳಗ್ಗೆ ತಾಲ್ಲೂಕಿನ ದೇವರಹೊಸಳ್ಳಿ ಗ್ರಾಮದಿಂದ ಪ್ರಚಾರ ಆರಂಭವಾಗಲಿದ್ದು, ನಂತರ ನೀಲಕಂಠನಹಳ್ಳಿ, ಸುಣ್ಣಘಟ್ಟ, ಮೋಳೆದೊಡ್ಡಿ ಗ್ರಾಮ, ಕೂಡ್ಲೂರು, ಮಸಿಗೌಡನದೊಡ್ಡಿ, ನೀಲಸಂದ್ರ, ಕೋಡಿಪುರ, ಹೊಂಗನೂರು ಗ್ರಾಮಗಳಲ್ಲಿ ಪ್ರಚಾರ ನಡೆಯಲಿದೆ ಎಂದು ತಾಲ್ಲೂಕು ಜೆಡಿಎಸ್ ಪ್ರಕಟಣೆ ತಿಳಿಸಿದೆ.
Laxmi News 24×7