Breaking News

ಹೋಗು ಮಗನೇ.. ನೀನು ಗೆಲ್ಲುತ್ತಿಯಾ: ನಿಖಿಲ್‌ ಕುಮಾರಸ್ವಾಮಿಗೆ ಆಶೀರ್ವಾದ ಮಾಡಿದ ಅಜ್ಜಿ

Spread the love

ನ್ನಪಟ್ಟಣ, ಅಕ್ಟೋಬರ್‌ 28: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಭಾನುವಾರ ಬಿರುಸಿನ ಪ್ರಚಾರ ನಡೆಸಿದ್ದಾರೆ. ಪ್ರಚಾರದ ನಡುವೆ ದಶಾವರ ಗ್ರಾಮಕ್ಕೆ ಬಂದ ನಿಖಿಲ್ ಅವರನ್ನು ಆಶೀರ್ವದಿಸಿದ ಅಜ್ಜಿಯೊಬ್ಬರು, ಹೋಗು ಮಗನೇ..

ನಿನಗೆ ಒಳ್ಳೆಯದಾಗುತ್ತದೆ. ನೀನು ಗೆದ್ದೇ ಗೆಲ್ಲುವೆ ಎಂದು ಆಶೀರ್ವದಿಸಿದರು. ಅಜ್ಜಿಯಿಂದ ಮಾತಿನಿಂದ ಭಾವುಕರಾದ ನಿಖಿಲ್ ಅವರು, ಕಣ್ಣಲ್ಲಿ ನೀರು ತುಂಬಿಕೊಂಡರು. ನಿಮ್ಮ ಆಶೀರ್ವಾದ ಇದ್ದರೆ ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದರು.

ಚನ್ನಪಟ್ಟಣ ಕ್ಷೇತ್ರದ ಪ್ರಚಾರದ ವೇಳೆ ಕಾರ್ಯಕರ್ತರು, ಮುಖಂಡರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮುಖಂಡರ ಮನವೊಲಿಸಿದರು. ಮಾಕಳಿ ಗ್ರಾಮದಲ್ಲಿ ಮುಖಂಡರ ಮನವೊಲಿಕೆ ಮಾಡುವಲ್ಲಿ ಅವರು ಯಶಸ್ವಿಯಾದರು. ಬಳಿಕ ಎಲ್ಲಾ ಕಾರ್ಯಕರ್ತರು, ಮುಖಂಡರು ನಿಖಿಲ್ ಅವರ ಜತೆ ಪ್ರಚಾರದಲ್ಲಿ ಹೆಜ್ಜೆ ಹಾಕಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ