Breaking News

ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯ ವರ್ತನೆ

Spread the love

ಬೆಂಗಳೂರು : ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ ಬಂದಿದ್ದು, ಅದನ್ನು ತೆಗೆದುಕೊಳ್ಳಲು ಹೊರಗಡೆ ಬಂದ ಯುವತಿ ಜೊತೆ ಸೆಕ್ಯೂರಿಟಿ ಗಾರ್ಡ್ ಅಸಭ್ಯವಾಗಿ ವರ್ತಿಸಿದ್ದು, ಘಟನೆ ಸಂಬಂಧ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪಶ್ಚಿಮ ಬಂಗಾಳ ಮೂಲದ ಯುವತಿ ಪೀಣ್ಯ ಸಮೀಪದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಸಮೀಪದ ಪಿಜಿಯಲ್ಲಿ ನೆಲೆಸಿದ್ದಾರೆ.

 

ರುದ್ರಯ್ಯ ಬಂಧಿತ ಆರೋಪಿ. ಈತ ನಾಲ್ಕು ದಿನಗಳ ಹಿಂದೆ ಪಿಜಿಯಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಸಂತ್ರಸ್ತೆ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ