ಗದಗ: ಕಪ್ಪತಗುಡ್ಡದಲ್ಲಿನ ಎಲ್ಲಾ 28 ಗಣಿಗಾರಿಕೆ ಪ್ರಸ್ತಾವನೆಗಳನ್ನು ತಿರಸ್ಕರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾರಿಯಿದ್ದಾರೆ. ಇತ್ತೀಚೇಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಗಣಿಗಾರಿಕೆ ಪ್ರಸ್ತಾವನೆಗಳನ್ನು ಮುಂದೂಡಿದ್ದರು.
ಇದೀಗ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಗಣಿಗಾರಿಕೆ ಪ್ರಸ್ತಾವನೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ವಾರ ತೋಂಟದಾರ್ಯ ಮಠಾಧೀಶರು, ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಡಿಸಿ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಿ ಗಣಿಗಾರಿಕೆ ಪ್ರಸ್ತಾವ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ನಡೆಸಬಾರದು ಎಂದು ಗದಗ ಮತ್ತು ಸುತ್ತಮುತ್ತಲಿನ ಅನೇಕ ಸಾಮಾಜಿಕ ಕಾರ್ಯಕರ್ತರು, ನ್ಯಾಯಮೂರ್ತಿಗಳು ಮತ್ತು ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ. ಆದರೂ ಉದ್ಯಮಿಗಳು ಗಣಿಗಾರಿಕೆಯ ಪ್ರಯತ್ನ ಕೈ ಬಿಟ್ಟಿಲ್ಲ. ಈ ನಿಟ್ಟಿನಲ್ಲಿ ಗಣಿಗಾರಿಕೆ ಆರಂಭಿಸಲು 28 ಪ್ರಸ್ತಾವನೆಗಳು ಸರಕಾರದ ಮುಂದೆ ಬಂದಿವೆ.