ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಹಾಗೂ ಜಾತಿ ಗಣತಿ ವರದಿ ಬಿಡುಗಡೆ ಕುರಿತು ರಾಜ್ಯ ಸರ್ಕಾಕ ಇಕ್ಕಟ್ಟಿಗೆ ಸಿಲುಕಿದ್ದು, ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿ ಸಂಬಂಧಪಟ್ಟ ಸಮುದಾಯಗಳಿಗೆ ಸಂದೇಶ ರವಾನಿಸುವ ಸಾಧ್ಯತೆ ಇದೆ.
ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವುದರಿಂದ ಯಾವುದೇ ದೃಢ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ. ಆದರೆ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಿ ಚುನಾವಣಾ ಫಲಿತಾಂಶದಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವು ಸಮುದಾಯಗಳಿಗೆ ಸಂದೇಶ ರವಾನಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ-2015ನ್ನು ಫೆ. 9ರಂದು ಆಯೋಗದ ಅಂದಿನ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಂದ ಸ್ವೀಕರಿಸಿದ್ದ ಸರಕಾರ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿ ಪ್ರಕಟಿಸಿತ್ತು. ಇದಕ್ಕೆ ಸಾಕಷ್ಟು ವಿರೋಧಗಳೂ ಇದ್ದು ವಿವಾದಾಸ್ಪದ ವರದಿಯಾಗಿದೆ.
Laxmi News 24×7