Breaking News

ನಿಖಿಲ್ 2 ಬಾರಿ ಸೋತಿದ್ದಾಗ ಅಭಿಮನ್ಯು ಆಗಿರಲಿಲ್ಲವಾ: HDKಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Spread the love

ಬೆಂಗಳೂರು: ನಿಖಿಲ್ ಕುಮಾರಸ್ವಾಮಿಯವರು ಎರಡು ಬಾರಿ ಸೋತಿದ್ದರು ಆಗ ಅಭಿಮನ್ಯು ಆಗಿರಲಿಲ್ಲವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭಾನುವಾರ ತಿರುಗೇಟು ನೀಡಿದರು.

ಅರಮನೆ ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ನಿಖಿಲ್ ಅಭಿಮನ್ಯು ಅಲ್ಲ, ಅರ್ಜುನ ಆಗಿ ಬರುತ್ತಾನೆ ಎಂಬ ಹೆಚ್.

ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಎರಡು ಬಾರಿ ಚುನಾವಣೆಯಲ್ಲಿ ಸೋತಾಗ ನಿಖಿಲ್ ಅಭಿಮನ್ಯು ಆಗಿರಲಿಲ್ವಾ?. ಮಂಡ್ಯ, ರಾಮನಗರದಲ್ಲಿ ಸೋತಿದ್ದಾರೆ. ಈಗ ಇದ್ದಕ್ಕಿದ್ದಂತೆ ಅರ್ಜುನ ಆಗುತ್ತಾರಾ? ಎಂದು ಪ್ರಶ್ನಿಸಿದರು

ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಭೆ ನಡೆಸಲಾಯಿತು ಎಂದು ಇದೇ ವೇಳೆ ಸಿಎಂ ತಿಳಿಸಿದರು.

ಯಾವುದೇ ಕಾರಣಕ್ಕೂ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದಿಲ್ಲ. ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ