ಮೈಸೂರು: ವಕ್ಫ್ ಮಂಡಳಿ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರೈತರಿಗೆ ನೋಟಿಸ್ ನೀಡಿದೆ. ಈ ಮಂಡಳಿಯನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ.
ವಕ್ಫ್ ಬೋರ್ಡ್ 16,000 ಎಕರೆಯಲ್ಲಿ ಮಾಲೀಕತ್ವ ಪಡೆದಿರುವ ರೈತರಿಗೆ ನೋಟಿಸ್ ನೀಡಿದೆ. ಈ ನೋಟಿಸ್ ವಿರೋಧಿಸಿ ದಲಿತರು, ರೈತರು ಮತ್ತು ಕೆಲವು ಮುಸ್ಲಿಮರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ವಕ್ಫ್ ಕುರಿತು ಸಂಸತ್ತಿನ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು ಮತ್ತು ವಕ್ಫ್ ಮಂಡಳಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಸರ್ಕಾರ 172 ಕೋಟಿ ಲೂಟಿ ಮಾಡಿದೆ ಎಂದು ಆರೋಪಿಸಿದರು.
Laxmi News 24×7