ಬೆಂಗಳೂರು: ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ರೈತರಿಂದ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿಯಿಂದ ತಂಡವೊಂದನ್ನು ರಚಿಸಲಾಗಿದೆ.
ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ , ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದಲ್ಲಿದ್ದಾರೆ.
ಈ ತಂಡ ಅಕ್ಟೋಬರ್ 24 ರಂದು ವಿಜಯಪುರಕ್ಕೆ ಭೇಟಿ ಭೇಟಿ ನೀಡಲಿದೆ. ತಂಡದ ಸದಸ್ಯರು ರೈತರ ಸಮಸ್ಯೆ ಕುರಿತು ಸಮಗ್ರ ವರದಿಯನ್ನು ನೀಡಲು ನಿರ್ದೇಶಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.