Breaking News

ವಕ್ಫ್ ಬೋರ್ಡ್ ನೋಟಿಸ್: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ರಚನೆ

Spread the love

ಬೆಂಗಳೂರು: ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ರೈತರಿಂದ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿಯಿಂದ ತಂಡವೊಂದನ್ನು ರಚಿಸಲಾಗಿದೆ.

ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ , ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದಲ್ಲಿದ್ದಾರೆ.

ಈ ತಂಡ ಅಕ್ಟೋಬರ್ 24 ರಂದು ವಿಜಯಪುರಕ್ಕೆ ಭೇಟಿ ಭೇಟಿ ನೀಡಲಿದೆ. ತಂಡದ ಸದಸ್ಯರು ರೈತರ ಸಮಸ್ಯೆ ಕುರಿತು ಸಮಗ್ರ ವರದಿಯನ್ನು ನೀಡಲು ನಿರ್ದೇಶಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ