ßಬೆಂಗಳೂರು: ಕಾಂಗ್ರೆಸ್ ನ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ವಾಟ್ಸಪ್ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲರನ್ನು ಬಂಧಿಸಲಾಗಿದೆ. ಮಂಜುಳಾ ಪಾಟೀಲ್ ಹನಿ ಟ್ರ್ಯಾಪ್ ಖೆಡ್ಡಾಗೆ ಮಾಜಿ ಸಚಿವರಷ್ಟೇ ಅಲ್ಲ, ಇನ್ನು ಗಣ್ಯರನ್ನು ಖೆಡ್ಡಾಗೆ ಬೀಳಿಸಿರುವ ಮಾಹಿತಿ ಆಕೆಯ ಮೊಬೈಲ್‌ನಲ್ಲಿ ಪತ್ತೆಯಾಗಿದೆ.
ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಮಂಜುಳಾ, ಆ ಆಡಿಯೋ-ವಿಡಿಯೋಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.
ಡೀಲ್ ಕುದುರಿಸಲು ಬೆಂಗಳೂರಿಗೆ ಆಗಮಿಸಿದ್ದ ದಂಪತಿ ಮಾಲೀಕಯ್ಯ ಪುತ್ರ ರಿತೀಶ್ ಅವರನ್ನು ಭೇಟಿಯಾಗಿದ್ದರು. ಈ ವಿಚಾರವಾಗಿ ರಿತೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಕೋರ್ಟ್ ಎಂಟು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
Laxmi News 24×7