ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು.
ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ
ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ ನಿಧಿಯಿಂದ ₹5 ಲಕ್ಷ ಕೊಟ್ಟಿದ್ದಾರೆ. ಕುಟುಂಬದ ಸದಸ್ಯ ರೊಬ್ಬರಿಗೆ ಸರ್ಕಾರಿ ಉದ್ಯೋಗ, ಮನೆ ನೀಡಲು ವಿನಂತಿಸಿದ್ದೇವೆ.
ಶಾಸಕ ಪ್ರಸಾದ ಅಬ್ಬಯ್ಯ ಅವರು ಸೋನಿಯಾ ಗಾಂಧಿ ನಗರದಲ್ಲಿ ಮನೆ ನೀಡುವುದಾಗಿ ಹೇಳಿದ್ದಾರೆ’
Laxmi News 24×7