ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಎಂಟು ಕುಟುಂಬ ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 2.04 ಲಕ್ಷ ರೂಪಾಯಿ ಮೊತ್ತದ ಚೆಕ್ ಗಳನ್ನು ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿದೆ.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಚೆಕ್ ವಿತರಿಸಲಾಗಿದೆ.
ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಕಳಪೆ ಕಾಮಗಾರಿಯಿಂದಾಗಿ ಅವಘಡ ಸಂಭವಿಸಿತ್ತು.
Laxmi News 24×7