Breaking News

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ

Spread the love

ಶಿವಮೊಗ್ಗ: ಪತಿ-ಪತ್ನಿ ನಡುವಿನ ಜಗಳಕ್ಕೆ ಬೇಸತ್ತ ಪತ್ನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದಲ್ಲಿ ನಡೆದಿದೆ.

ಕಮಲಾ ಬಿ.ಪಿ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ತಡರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ.

ವಿನೋಬಾನಗರ ರೈಲ್ವೆ ಟ್ರ್ಯಾಕ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಮಹಿಳೆಯ ದೇಹ, ತಲೆ, ಕೈಗಳು ಛಿದ್ರಗೊಂಡು ಬೇರ್ಪಟ್ಟಿವೆ. ಕಮಲಾ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಪತಿ-ಪತ್ನಿ ನಡುವೆ ಜಗಳವಾಗಿದೆ. ಪತಿಯ ಮಾತಿಗೆ ನೊಂದ ಕಮಲಾ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ