ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಡಿಸಿ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು ಇಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ಆಗಮಿಸಿದ್ದಾರೆ.
ಹುಬ್ಬಳ್ಳಿಗೆ ಆಗಮಿಸಿದ ವೇಳೆ ಜಮೀರ್ ಅಹ್ಮದ್ ಖಾನ್ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಜ್ಜಂಪೀರ್ ಖಾದ್ರಿ ನಾಳೆ ನಾಮಪತ್ರ ಹಿಂಪಡೆಯುತ್ತಾರೆ. ಸ್ವಇಚ್ಛೆಯಿಂದ ಅವರು ನಾಮಪತ್ರ ಹಿಂಪಡೆಯಲ್ಲಿದ್ದಾರೆ. ಈಗಾಗಲೇ ಖಾದ್ರಿ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಖಾದ್ರಿ ಜೊತೆಗೆ ಸಂಧಾನ ಸಕ್ಸಸ್ ಆಗಿದೆ. ಹಾಗಾಗಿ ನಾಳೆ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದರು.