Breaking News

ಗಾಂಜಾ, ಡ್ರಗ್ಸ್‌ ಮಾರಾಟ ಜಾಲಕ್ಕೆ ಅಂಕುಶ: ಪರಮೇಶ್ವರ

Spread the love

ಶಿವಮೊಗ್ಗ: ‘ರಾಜ್ಯದಲ್ಲಿ ಗಾಂಜಾ, ಡ್ರಗ್ಸ್‌ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲಕ್ಕೆ ಸಂಪೂರ್ಣ ಅಂಕುಶ ಹಾಕಿ ಅದನ್ನು ಬುಡಸಮೇತ ಕಿತ್ತು ಹಾಕುತ್ತೇವೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

‘ಬೆಂಗಳೂರಿನಲ್ಲಿ ಶುಕ್ರವಾರ ₹1.50 ಕೋಟಿ ಮೌಲ್ಯದ ಗಾಂಜಾ ವಶ‍ಪಡಿಸಿಕೊಂಡು ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಲಾಗಿದೆ.

ವಾರದ ಹಿಂದೆ ₹ 5 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದರೆ ಆಯಾ ಠಾಣಾ ವ್ಯಾಪ್ತಿಯ ಅಧಿಕಾರಿಗಳು, ಎಸ್ಪಿ ಹಾಗೂ ಡಿಸಿಪಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಸುದ್ದಿಗಾರರಿಗೆ ಶನಿವಾರ ತಿಳಿಸಿದರು.

‘ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದಿಲ್ಲ. ಜಾತಿ ಗಣತಿ ವರದಿಯನ್ನು ಮೊದಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚಿಸುತ್ತೇವೆ. ಆಮೇಲೆ ಅದರ ಜಾರಿ ಕುರಿತು ನೋಡೋಣ’ ಎಂದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ