ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಿಲಾ ಶಾಸನವೆಂಬ ಹೆಗ್ಗಳಿಕೆಯ “ಹಲ್ಮಿಡಿ ಶಾಸನ’ದ ಮಹತ್ವವನ್ನು ರಾಜ್ಯಾದ್ಯಂತ ಪ್ರಚುರಪಡಿಸುವ ಆಶಯದಿಂದ ಎಲ್ಲ ಜಿಲ್ಲೆಗಳಲ್ಲಿಯೂ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ಸ್ಥಾಪನೆಗೆ ಸರಕಾರ ಮುಂದಾಗಿದೆ.
“ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ.
ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ರಚಿಸಲಾಗಿದೆ. ಎಲ್ಲ ಜಿಲ್ಲೆಗಳ ಜಿಲ್ಲಾಡಳಿತದ ವತಿಯಿಂದ ಶಿಲಾಶಾಸನವನ್ನು ಪ್ರತಿಷ್ಠಾಪನೆ ಮಾಡಿ ನ. 1 ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನಾವರಣ ಮಾಡಲು ಉದ್ದೇಶಿಸಲಾಗಿದೆ.
ಎಚ್‌ಡಿ ಕೋಟೆ ಕಲ್ಲು
ಎಚ್‌ಡಿ ಕೋಟೆಯಿಂದ ತರಿಸಿದ ಕಲ್ಲಿನಿಂದ ಹಲ್ಮಿಡಿ ಶಿಲಾಶಾಸನವನ್ನು ಚಿಕ್ಕಮಗಳೂರಿನಲ್ಲಿ ಸಿದ್ದಪಡಿಸಲಾಗಿದೆ. ಹೀಗೆ ಸಿದ್ದವಾದ ಶಿಲಾ ಶಾಸನದ ಪ್ರತಿಕೃತಿಯನ್ನು ಎಲ್ಲ ಜಿಲ್ಲಾ ಕೇಂದ್ರಗಳಿಗೆ ಈಗಾಗಲೇ ಕಳುಹಿಸಲಾಗಿದೆ. ಪ್ರತಿಷ್ಠಾಪನೆ ನಡೆಸುವ ಸ್ಥಳಗಳಲ್ಲಿ ಕಲ್ಲಿನ ಪ್ರತಿಕೃತಿ ತಂದು ನಿಲ್ಲಿಸಲಾಗಿದೆ.
Laxmi News 24×7