ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ.
ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ. ಆದ್ದರಿಂದ ಸರ್ಕಾರ ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಹೊಸ ಕಾಲೇಜುಗಳ ಸ್ಥಾಪನೆಗೆ ಆರ್ಥಿಕ ಇಲಾಖೆ ಅನುಮೋದನೆ ಕೇಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಹೊಸ ಕಾಲೇಜುಗಳು ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆರಂಭವಾಗಲಿವೆ.
Laxmi News 24×7