ಸುವರ್ಣ ರಾಜ್ಯ ಪ್ರಶಸ್ತಿಗೆ ಚಲವಾದಿ ಆಯ್ಕೆ

Spread the love

ಖಾನಾಪುರ: ಕರ್ನಾಟಕ ಸಂಭ್ರಮ ಸುವರ್ಣ ಮಹೋತ್ಸವ ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಘೋಷಿಸಿದ ರಾಜ್ಯ ಪ್ರಶಸ್ತಿಗೆ ತಾಲ್ಲೂಕಿನ ಮಂಗೇನಕೊಪ್ಪ ಗ್ರಾಮದ ನಿವಾಸಿ, ನಿವೃತ್ತ ಅರಣ್ಯ ಅಧಿಕಾರಿ ಎಸ್.ಎಂ ಚಲವಾದಿ ಆಯ್ಕೆಯಾಗಿದ್ದಾರೆ.

ಚಲವಾದಿಯವರು ಮೂರೂವರೆ ದಶಕ ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದಾರೆ.

ನಿವೃತ್ತಿಯ ಬಳಿಕ ಅರಣ್ಯ ಸಂರಕ್ಷಣೆ, ಪರಿಸರ ರಕ್ಷಣೆಯ ಕುರಿತು ಕಾಳಜಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅವರ ಸಾಮಾಜಿಕ ಕಳಕಳಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ಅವರಿಗೆ ಈ ಬಾರಿಯ ಕರ್ನಾಟಕ ಸಂಭ್ರಮ ಸುವರ್ಣ ಮಹೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಚಲವಾದಿಯವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ಮಂಗೇನಕೊಪ್ಪ ಗ್ರಾಮದ ನಾಗರಿಕರು ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ನಾವು ಗೆಲುವಿನ ಅಂತರ ನೋಡುತ್ತಿಲ್ಲ, ಗೆಲುವು ಮಾತ್ರ ನೋಡುತ್ತಿದ್ದೇವೆ : ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ

Spread the love ಹಾವೇರಿ : ಮುಂದಿನ ತಿಂಗಳು ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಮನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ