ಗದಗ: ಸಚಿವ ಡಾ.ಎಚ್.ಕೆ. ಪಾಟೀಲ ಶುಕ್ರವಾರ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬೆಳಿಗ್ಗೆ 7.45ಕ್ಕೆ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕನ್ನಡ ತಾಯಿ ಭುವನೇಶ್ವರಿಯ ಪುತ್ಥಳಿಯ ಮೆರವಣಿಗೆಗೆ ಚಾಲನೆ ನೀಡುವರು.
ಬೆಳಿಗ್ಗೆ 8.30ಕ್ಕೆ ಬೆಟಗೇರಿ ತೆಂಗಿನಕಾಯಿ ಬಜಾರ್‌ನಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಬೆಳಿಗ್ಗೆ 9ಕ್ಕೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು.
ಮಧ್ಯಾಹ್ನ 12ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.