Breaking News

ಪಟಾಕಿ ಸಾಗಿಸುತ್ತಿದ್ದ ವೇಳೆ Onion Bomb ಸ್ಫೋಟಗೊಂಡು ಓರ್ವ ಸಾವು, ಆರು ಮಂದಿಗೆ ಗಾಯ

Spread the love

ಮರಾವತಿ: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಪಟಾಕಿ ಸಂಬಂಧಿತ ಅವಘಡಗಳು ವರ್ಷ ಕಳೆದಂತೆ ಹೆಚ್ಚಾಗುತ್ತಿವೆ. ಇದೀಗ ಆಂಧ್ರಪ್ರದೇಶ ಏಳೂರಿನಲ್ಲಿ ಈರುಳ್ಳಿ ಬಾಂಬ್​ (Onion Bomb) ಪಟಾಕಿ ಸ್ಪೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

 

ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಕಿರಿದಾದ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಸ್ಕೂಟರ್​ನಲ್ಲಿ ಪಟಾಕಿ ತುಂಬಿರುವ ಚೀಲವನ್ನು ಸಾಗಿಸುತ್ತಿರುವುದನ್ನು ನೋಡಬಹುದಾಗಿದೆ. ರಸ್ತೆ ಗುಂಡಿಗೆ ಗಾಡಿಯನ್ನು ಇಳಿಸಿದಾಗ ಪಟಾಕಿ ಚೀಲ ನೆಲಕ್ಕುರುಳಿದ್ದು, ಹಠಾತ್ತಾಗಿ ಈರುಳ್ಳಿ ಬಾಂಬ್​ (Onion Bomb) ಸ್ಫೋಟಗೊಂಡಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಅವಘಡದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೃತರನ್ನು ಸುಧಾಕರ್​ ಎಂದು ಗುರುತಿಸಲಾಗಿದ್ದು, ಈರುಳ್ಳಿ ಪಟಾಕಿಯನ್ನು ಸಾಗಿಸುವ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಗುಂಡಿಯಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ