ಜಮಖಂಡಿ: ಶಹರ ಠಾಣೆ ಪಿಎಸ್‌ಐ ಅನೀಲ ಕುಂಬಾರ ಹೆಸರಿನಲ್ಲಿ ಐದು ನಕಲಿ ಫೇಸ್‌ಬುಕ್ ಖಾತೆ ಮತ್ತು ಒಂದು ಇನ್‌ಸ್ಟಾಗ್ರಾಂ ಖಾತೆ ತೆರೆದ ಆರೋಪಿಯನ್ನು ಬಂಧಿಸಲಾಗಿದೆ.
ಪಿಎಸ್‌ಐ ಸಮವಸ್ತ್ರದ ಮೇಲಿನ ಹಾಗೂ ಇನ್ನಿತರ ಚಿತ್ರಗಳನ್ನು ಬಳಸಿಕೊಂಡು ರಾಜಕೀಯ ಮುಖಂಡರಿಗೆ ಹಾಗೂ ಮಹಿಳೆಯರಿಗೆ ಸಂದೇಶ ಕಳುಹಿಸಿ ವಂಚನೆ ಮಾಡುತ್ತಿದ್ದು ಹಾಗೂ ಹಣ ಬೇಡಿಕೆ ಇಡುತ್ತಿರುವ ಬಗ್ಗೆ ಮಾಹಿತಿ ತಿಳಿದಾಗ ಪಿಎಸ್‌ಐ ಅನೀಲ ಕುಂಬಾರ ಬಾಗಲಕೋಟೆ ಸಿಇಎನ್ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಅಥಣಿ ತಾಲ್ಲೂಕಿನ ವಿಜಯಕುಮಾರ ಎಂಬುವವನನ್ನು ಮುಂಬೈನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.