Breaking News

B.G.S. ಆಸ್ಪತ್ರೆಗೆ ದಾಖಲಾದ ನಟ ದರ್ಶನ್

Spread the love

ಬೆಂಗಳೂರು: ಚಿಕಿತ್ಸೆಗಾಗಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ಎ2 ಆರೋಪಿ ನಟ ದರ್ಶನ್, ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಅ.30ರಂದು ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ನಿಟ್ಟಿನಲ್ಲಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್, ಇಂದು ಕೆಂಗೇರಿ ಬಳಿಯ ವಿಷ್ಣುವರ್ಧನ್ ರಸ್ತೆಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಇಂದು ಮಧ್ಯಾಹ್ನ ಪತ್ನಿ ವಿಜಯಲಕ್ಷ್ಮೀ ಜೊತೆ ಆಸ್ಪತ್ರೆಗೆ ಆಗಮಿಸಿದ ದರ್ಶನ್, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಡ್ಮಿಟ್ ಆಗಿದ್ದಾರೆ. ತಜ್ಞ ವೈದ್ಯರಿಂದ ದರ್ಶನ್ ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ