Breaking News

ಎಂಇಎಸ್‌ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ಕರ್ನಾಟಕ ಆಚರಣೆ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮತ್ತೆ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಕರಾಳ ದಿನಾಚರಣೆ ಮಾಡಿದೆ.

ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡದಿದ್ದರೂ ಎಂಇಎಸ್ ನಾಯಕರು ಕರಾಳ ದಿನಾಚರಣೆ ಮಾಡಿದ್ದಾರೆ.

ಕರಾಳ ದಿನಾಚರಣೆ ಮಾಡಿರುವ ಎಂಇಎಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

 

ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸುವ ಅಗತ್ಯ ಇಲ್ಲ. ಅದು ಹೆಸರಿಗಷ್ಟೇ ಇದೆ. ವರ್ಷದಲ್ಲೊಮ್ಮೆ ಅದಕ್ಕೆ ಕರಾಳ ದಿನ ನೆನಪಾಗುತ್ತದೆ. ಆದ್ದರಿಂದ ಅದನ್ನು ನಿಷೇಧಿಸುವುದಕ್ಕಿಂತ ನಿರ್ಲಕ್ಷ ಮಾಡುವುದು ಒಳಿತು.

ಎಂಇಎಸ್ ಸಂಘಟನೆ ನಿಷೇಧಿಸಿದರೆ, ಮತ್ತೆ ಅದರ ಕಡೆಗೆ ಹೆಚ್ಚಿನ ಒಲವು ಹೊಂದುವ ಸಾಧ್ಯತೆಯಿದೆ. ಹಾಗಾಗಿ ಅದನ್ನು ನಿಷೇಧಿಸುವುದಿಲ್ಲ‌ ಎಂದು ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ