Breaking News

ಟ್ರ್ಯಾಕ್ಟರ್- ಆಟೋ ಡಿಕ್ಕಿ- ಇಬ್ಬರು ಕೂಲಿ ಕಾರ್ಮಿಕರು ಸಾವು, ಐವರಿಗೆ ಗಂಭೀರ ಗಾಯ

Spread the love

ಹುಬ್ಬಳ್ಳಿ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಲಿ ಕೆಲಸಕ್ಕಾಗಿ ಆಟೋದಲ್ಲಿ ತೆರಳುತ್ತಿದ್ದ ಎಂಟು ಜನರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಮೃತರ ವಿವರ ಇನ್ನು ತಿಳಿದುಬಂದಿಲ್ಲ.ಟ್ರ್ಯಾಕ್ಟರ್ ಟಂಟಂಗೆ ಡಿಕ್ಕಿ ಹೊಡೆದ ರಭಸಕ್ಕೆ ಗಾಯಾಳುಗಳೆಲ್ಲ ರಕ್ತಸಿಕ್ತವಾಗಿದ್ದು, ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಕೂಲಿ ಕೆಲಸಕ್ಕೆ ಹೊರಟಿದ್ದರಿಂದ ಕಟ್ಟಿಕೊಂಡಿದ್ದ ಬುತ್ತಿ, ಮೃತಪಟ್ಟವರ ಬಳಿಯೇ ಚೆಲ್ಲಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸಂಬಂಧ ಕಲಘಟಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ