ಬೆಂಗಳೂರು, ನವೆಂಬರ್ 02: ಶಕ್ತಿ ಯೋಜನೆ ಮರು ಪರಿಶೀಲಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ರಾಜ್ಯಾದ್ಯಂತೆ ಶಕ್ತಿ ಯೋಜನೆ ಕಿಡಿ ಹೊತ್ತಿಕೊಂಡಿದೆ. ಆರೋಪ, ಪ್ರತ್ಯಾರೋಪಗಳ ಮಧ್ಯೆ ಸವಾಲೆಸೆಯುವುದು, ಬಹಿರಂಗ ಚರ್ಚೆಗೆ ಆಹ್ವಾನ ನಡೆದಿದೆ.
ಈ ಮಧ್ಯೆ ಶಕ್ತಿ ಯೋಜನೆಗಳ ಬಗ್ಗೆ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.
ಟ್ವೀಟ್ ಮೂಲಕ ಕಿರಿ ಕಾರಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, ಆರ್.ಅಶೋಕ್ ಅವರೆ ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.
ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ಬಿಜೆಪಿಯವರಂತೆ ನಾವು ಗಾಳಿಯಲ್ಲಿ ಗುಂಡು ಹಾರಿಸುವುದಿಲ್ಲ. ಕಾಂಗ್ರೆಸ್ ಅಭಿವೃದ್ಧಿಗೆ ಸಾಧನೆಗೆ ಅಂಕಿಅಂಶಗಳು ಇವೆ ಎಂದು ವಿವರಿಸಿದ್ದರೆ.
ಬಿಜೆಪಿ ಅಧಿಕಾರಾವಧಿಯಲ್ಲಿಯೇ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಲುಪಿವೆ. ಈ ಕಟು ಸತ್ಯ ನಿಮಗೆ ತಿಳಿದಿದ್ದರೂ ಸಹ ಜಾಣ ಕುರುಡು ತೋರುವ ನಿಮ್ಮ ಬಗ್ಗೆ ನನಗೆ ಕನಿಕರವಿದೆ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಯಾವ ಸಾಧನೆಗಳನ್ನು ಮಾಡಿದ್ದೀರಾ? ಬೇಕಿದ್ದರೆ ಹೇಳಿ ಆ ಬಗ್ಗೆ ಚರ್ಚೆಗೆ ನಾವು ಸಿದ್ಧ ಎಂದು ಅವರು ಸವಾಲೆಸಿದ್ದಾರೆ.
Laxmi News 24×7