Breaking News

ವಕ್ಫ್ ವಿವಾದ: ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದು, ಪಹಣಿ ತಿದ್ದುಪಡಿ ರದ್ದು ಮಾಡಿ- ಸಿಎಂ ಖಡಕ್ ಸೂಚನೆ!

Spread the love

ಬೆಂಗಳೂರು: ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು.

ಈ ವೇಳೆ ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದು ಈ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಿದ್ದರಾಮಯ್ಯ ವಿನಂತಿ ಮಾಡಿದ್ದು ಅವರ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಜನತೆಗೆ ಮನವಿ ಮಾಡಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ