Breaking News

ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

Spread the love

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು.

ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. ವಿವಾಹದ ಬಳಿಕ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ