Breaking News

ಜಮೀರ್ ಅಹ್ಮದ್ ಗಡಿಪಾರು ಮಾಡುವಂತೆ ಬಿ.ವೈ. ವಿಜಯೇಂದ್ರ ಆಗ್ರಹ

Spread the love

ಚಿತ್ರದುರ್ಗ: ಶಾಂತಿಯುತವಾದ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ರಿಂದ ಬೆಂಕಿ ಹಚ್ಚುವ ಕೆಲಸಗಳು ನಡೆಯುತ್ತಿವೆ. ಮೊದಲು ಜಮೀರ್ ಅಹ್ಮದ್ ರನ್ನು ಗಡಿಪಾರು ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ.

ಆದ್ರೆ ಸಿಎಂ ಸಿದ್ದರಾಮಯ್ಯ ಮೊದ್ಸಳೆ ಕಣ್ಣೀರು ಹಾಕುತ್ತಿದ್ದಾರೆ. ರೈತರಿಗೆ ನೀಡಿರುವ ವಕ್ಫ್ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಒತ್ತಾಯಿಸಿದರು.

ದಬ್ಬಾಳಿಕೆ ಮಾಡಿ ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಕೆ ಮಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಭೂಕಬಳಿಕೆ ಮಾಡುತ್ತಿದ್ದಾರೆ. ಮೊದಲು ಅವರನ್ನು ಗಡಿಪಾರು ಮಾಡಿದರೆ ಈ ರಾಜ್ಯಕ್ಕೆ ಒಳಿತಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ