Breaking News

ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ

Spread the love

ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್​ಬುಕ್ ಲೈವ್​ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಮಾರ್ಚ್ ತಿಂಗಳಲ್ಲಿ ಮುಕ್ತಾಯವಾಗಬೇಕಿದ್ದ ಪರೀಕ್ಷೆಗಳು ತಡವಾಗಿವೆ. ಇಂಗ್ಲೀಷ್ ಪರೀಕ್ಷೆಯೊಂದು ತಡವಾಗಿದ್ದರಿಂದ ಪರೀಕ್ಷೆಯ ಫಲಿತಾಂಶ ಕೂಡ ಅನಿವಾರ್ಯವಾಗಿ ತಡವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಶಿಕ್ಷಣ ಇಲಾಖೆ ಕಾರ್ಯದರ್ಶಿ ಮತ್ತು ನಿರ್ದೇಶಕರ ಜೊತೆ ಸಭೆಯ ನಂತರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ನಿರ್ಧಾರ ಮಾಡಲಾಗಿದೆ.

ಕೊರೋನಾ ವೈರಸ್ ಹಾಗೂ ಲಾಕ್​ಡೌನ್ ಕಾರಣಕ್ಕೆ ವಿದ್ಯಾರ್ಥಿಗಳ ಮೊಬೈಲ್​ಗೆ ನೇರವಾಗಿ ರಿಸಲ್ಟ್ ಕಳುಹಿಸಲು ನಿರ್ಧರಿಸಲಾಗಿದೆ. ಇಲಾಖೆಯ ಅಧಿಕೃತ ವೆಬ್​​ಸೈಟ್​​ಗಳಲ್ಲೊಂದಾದ www.karresults.nic.in ವೆಬ್​ಸೈಟ್​ನಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗುತ್ತದೆ.

ಮಾರ್ಚ್ ತಿಂಗಳಲ್ಲಿ ಲಾಕ್​ಡೌನ್ ಘೋಷಣೆಗೆ ಮುನ್ನ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಹೊರತುಪಡಿಸಿ ಉಳಿದ ಪರೀಕ್ಷೆಗಳು ಮುಕ್ತಾಯಗೊಂಡಿದ್ದವು. ಜೂನ್ 18ರಂದು ಇಂಗ್ಲೀಷ್ ಪರೀಕ್ಷೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಒಟ್ಟಾರೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳುವುದು ತಡವಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ