Breaking News

ಸವಣೂರ ವಿಧಾನಸಭಾ ಕ್ಷೇತ್ರ ಪ್ರಚಾರದಲ್ಲಿ ಭಾಗವಹಿಸಿದ ಸತೀಶ್ ಜಾರಕಿಹೊಳಿ

Spread the love

ಶಿಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ್ ಖಾನ್ ಪಠಾಣ ಪರ ಪ್ರಚಾರ ನಡೆಸುತ್ತಿರುವ ಮುಖಂಡರು, ‘ಜನಪರವಾದ ಐದು ಗ್ಯಾರಂಟಿ ಯೋಜನೆ ನೋಡಿ ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಕೋರುತ್ತಿದ್ದಾರೆ.

ಶಿಗ್ಗಾವಿ ಉಪಚುನಾವಣೆ | ಗ್ಯಾರಂಟಿಗಳು ಜನಮನ ಗೆದ್ದಿವೆ: ಸತೀಶ ಜಾರಕಿಹೊಳಿ

ಶಿಗ್ಗಾವಿ ಕ್ಷೇತ್ರದ ಚಾಕಾಪುರದಲ್ಲಿ ಭಾನುವಾರ ಪ್ರಚಾರ ನಡೆಸಿದ ಸಚಿವ ಸತೀಶ ಜಾರಕಿಹೊಳಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಜನರ ಪರವಿದೆ. ಐದು ಗ್ಯಾರಂಟಿ ಯೋಜನೆಗಳು ಜನರ ಮನ ಗೆದ್ದಿವೆ. ಇಂಥ ಯೋಜನೆ ನೀಡಿರುವ ‘ಕೈ’ಗೆ ಈ ಬಾರಿ ಆಶೀರ್ವಾದ ಮಾಡಿ’ ಎಂದರು. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ, ‘ಐದು ಗ್ಯಾರಂಟಿ ಯೋಜನೆಗಳು ಎಲ್ಲ ಧರ್ಮ ಹಾಗೂ ಜಾತಿಯವರಿಗೂ ತಲುಪಿವೆ. ಸರ್ವ ಜನಾಂಗದ ಏಳಿಗೆಗಾಗಿ ಐದು ಗ್ಯಾರಂಟಿ ಜಾರಿಗೊಳಿಸಲಾಗಿದೆ. ಬಿಜೆಪಿಯವರು ಸಹ ಗ್ಯಾರಂಟಿ ಯೋಜನೆ ಲಾಭ ಪಡೆಯುತ್ತಿದ್ದಾರೆ. ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ’ ಎಂದು ಹೇಳಿದರು.

ಯಾಸೀರ ಅಹ್ಮದ್ ಖಾನ್ ಪಠಾಣ, ‘ಇಲ್ಲಿ ಹೆಸರಿಗಷ್ಟೇ ನಾನು ಅಭ್ಯರ್ಥಿ. ನೈಜ ಅಭ್ಯರ್ಥಿ ಸಿದ್ದರಾಮಯ್ಯ. ಅವರ ಗ್ಯಾರಂಟಿ ಯೋಜನೆಗಳನ್ನು ನೋಡಿ ಮತ ಹಾಕಿ ಕಾಂಗ್ರೆಸ್ ಗೆಲ್ಲಿಸಿ’ ಎಂದು ಕೋರಿದರು.


Spread the love

About Laxminews 24x7

Check Also

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.

Spread the loveಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು. ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ