ಬೆಂಗಳೂರು, ನವೆಂಬರ್ 04: ಉದ್ಯಾನ ನಗರಿ ಬೆಂಗಳೂರಿನ ಲಾಲ್‌ಬಾಗ್‌ಗೆ ಹೋಗುವ ಮುನ್ನ ಇದನ್ನು ಓದಿ. ತೋಟಗಾರಿಕಾ ಇಲಾಖೆಯಿಂದ ನಿರ್ವಹಣೆ ಮಾಡಲಾಗುತ್ತಿರುವ ಲಾಲ್‌ಬಾಗ್‌ನ ಪ್ರವೇಶ ಶುಲ್ಕವನ್ನು ಭಾರೀ ಏರಿಕೆ ಮಾಡಲಾಗಿದೆ. ದಿನನಿತ್ಯ ಸಾವಿರಾರು ಜನರು ನಗರದ ಜಂಟಾಟದಿಂದ ತಪ್ಪಿಸಿಕೊಳ್ಳಲು ಲಾಲ್‌ಬಾಗ್‌ಗೆ ಭೇಟಿ ನೀಡುತ್ತಾರೆ.
ಈಗ ಅವರು ಹೊಸ ದರವನ್ನು ಕಟ್ಟಿ ಪವೇಶ ಪಡೆಯಬೇಕಿದೆ.
ತೋಟಗಾರಿಕಾ ಇಲಾಖೆ ಲಾಲ್‌ಬಾಗ್ ಪ್ರವೇಶ ಶುಲ್ಕವನ್ನು ಏರಿಕೆ ಮಾಡುವ ಮೂಲಕ ಪ್ರವಾಸಗರ ಜೇಬಿಗೆ ಕತ್ತರಿ ಹಾಕಿದೆ. ಸಾಮಾನ್ಯ ದಿನಗಳಲ್ಲಿ ಪ್ರತಿನಿತ್ಯ ನೂರಾರು ಜನರು, ವಾರಾಂತ್ಯ ಮತ್ತು ಸರ್ಕಾರಿ ರಜೆ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಜನರು ಲಾಲ್‌ಬಾಗ್‌ಗೆ ಭೇಟಿ ನೀಡುತ್ತಾರೆ.
ಪ್ರವೇಶ ಶುಲ್ಕ ಏರಿಕೆ: ಲಾಲ್‌ಬಾಗ್ ಪ್ರವೇಶ ಶುಲ್ಕ, ವಾಹನ ನಿಲುಗಡೆ ಶುಲ್ಕ ಎಷ್ಟು ಎಂದು ಪ್ರವೇಶ ದ್ವಾರದ ಮುಂದೆಯೇ ಬೋರ್ಡ್ ಹಾಕಲಾಗಿದೆ. ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುವಾಗ ದಿನಕ್ಕೆ ಲಕ್ಷಾಂತರ ಜನರು ಭೇಟಿ ನೀಡಲಿದ್ದು, ಹೊಸ ಶುಲ್ಕದಿಂದ ಹೊರೆಯಾಗಿದೆ ಎಂದು ದೂರಲಾಗುತ್ತಿದೆ.