Breaking News

ನ.11ರಿಂದ 14ರವರೆಗೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿ

Spread the love

ಳ್ಳಾರಿ : ಸಂಡೂರು ವಿಧಾನಸಭಾ ಉಪ ಚುನಾವಣೆಗೆ ನವೆಂಬರ್.13ರಂದು ಮತದಾನ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ನವೆಂಬರ್.11ರ ಸಂಜೆ 6ರಿಂದ ನವೆಂಬರ್.14ರ ಬೆಳಿಗ್ಗೆ 6 ಗಂಟೆಯವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ.

 

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ರ‍್ತುಗಳು) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊಂಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11 ರ ಸಂಜೆ 06 ಗಂಟೆಯಿಂದ ನ.14 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ