ಬೆಳಗಾವಿ :ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು.
ಸೋಮವಾರ ಬೆಳಗಾವಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತ, ಭ್ರಷ್ಟಾಚಾರ, ಮುಡಾ ಹಗರಣ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು ರಾಜಕಾರಣಕ್ಕೆ ಬಳಕೆ ಮಾಡಿರುವುದರಿಂದ ಕಾಂಗ್ರೆಸ್ ಶಾಸಕರೇ ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಡೂರು, ಶಿಗ್ಗಾವಿ, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ಶಿಗ್ಗಾವಿಯಲ್ಲಿ ಭರತ್ ಬಸವರಾಜ ಬೊಮ್ಮಾಯಿ ಅವರು ಶಿಕ್ಷಕಿತರು, ಬಸವರಾಜ ಬೊಮ್ಮಾಯಿ ಅವರು ಮಾಡಿದ ಅಭಿವೃದ್ಧಿ ಕಾರ್ಯ ಶಿಗ್ಗಾವಿ ಜನರ ಆಶೀರ್ವಾದ ಭರತ್ ಅವರ ಮೇಲಿದೆ. ಹಾಗಾಗಿ ಅವರು ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಕ್ಕರೆ ಕಾರ್ಖಾನೆಯ ಆಗುಹೋಗುಗಳ ಬಗ್ಗೆ ಬೆಂಗಳೂರಿನಲ್ಲಿಯೂ ಸಭೆ ಮಾಡಿದ್ದೇವೆ. ಅಲ್ಲದೆ ಬೆಳಗಾವಿಯಲ್ಲಿಯೂ ಸಭೆ ಮಾಡಿದ್ದೇವು. ಕಾರ್ಖಾನೆ ಕಬ್ಬು ಬೆಳೆಗಾರರು ಎರಡು ಕಣ್ಣು ಇದ್ದ ಹಾಗೆ ರೈತರ ಹಿತದೃಷ್ಟಿ ಹಾಗೂ ಕಾರ್ಖಾನೆಯ ಏಳಿಗೆಯಿಂದ ಯಾವಾಗ ಕಬ್ಬು ನುರಿಸುವ ಕಾರ್ಯ ಮಾಡಬೇಕೆಂಬುದರ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ಸಾಕಷ್ಟು ವಿಷಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಿಜೆಪಿ ಸದಸ್ಯರು ಕುಟುಂಬ ಇದ್ದ ಹಾಗೆ. ಯಾವುದೇ ಕಾರಣಕ್ಕೂ ನಮ್ಮಲ್ಲಿ ಭಿನ್ನಾಭಿಪ್ರಾಯ ಇಲ್ಲ. ಒಂದೇ ತಾಯಿ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ. ಮುಂಬರುವ ದಿನಗಳಲ್ಲಿ ಎಲ್ಲರೂ ಒಂದಾಗಿ ವಿಧಾನಸಭಾ ಚುನಾವಣೆಯಲ್ಲಿ 120ಕ್ಕೂ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಶ್ರಮಿಸುವುದಾಗಿ ನಿರಾಣಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
Laxmi News 24×7