Breaking News

ಮನೆ-ಮನೆಗೆ ಗಾಂಧಿ ಸಿದ್ಧಾಂತ ತಲುಪಿಸುತ್ತೇವೆ: ಎಚ್.ಕೆ.ಪಾಟೀಲ

Spread the love

ಬೆಳಗಾವಿ: ‘ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಗರದಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಮೂಲಕ ಗಾಂಧಿ ಅವರ ತತ್ವಗಳನ್ನು ಇನ್ನಷ್ಟು ಪ್ರಚುರಪಡಿಸುತ್ತೇವೆ. ಮನೆ-ಮನೆಗೆ ಗಾಂಧೀಜಿ ಸಿದ್ಧಾಂತ ತಲುಪಿಸುತ್ತೇವೆ’ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರೂ ಆಗಿರುವ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.

 

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಾಂಧಿವಾದಿಗಳು ಹಾಗೂ ಹಿರಿಯರ ಜತೆ ಸಮಗ್ರವಾಗಿ ಚರ್ಚಿಸಿ, ಅಧಿವೇಶನದ ಇತಿಹಾಸ ಮರು ಸೃಷ್ಟಿಸುತ್ತೇವೆ’ ಎಂದರು.

‘ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಇಂದು ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ನಂತರ, ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುತ್ತೇವೆ’ ಎಂದು ತಿಳಿಸಿದರು.

‘ಅಕ್ಟೋಬರ್ 2ರಿಂದ ಒಂದು ವರ್ಷದವರೆಗೆ ಶತಮಾನೋತ್ಸವ ವರ್ಷ ಆಚರಿಸಲಾಗುವುದು. ಬೆಳಗಾವಿಯಲ್ಲೇ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ಹಾಗೂ ಆ ಕಾರ್ಯಕ್ರಮಕ್ಕೆ ಅಮೆರಿಕದ‌ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಯಿಸಲು ಉದ್ಧೇಶಿಸಲಾಗಿದೆ. ಈ ಸಂಬಂಧ ಒಬಾಮಾ ಅವರಿಗೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ’ ಎಂದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ