Breaking News

ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲ

Spread the love

ಬೆಂಗಳೂರು, : ಸಂಡೂರು ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಚಂದ್ರೇಶಖರ್​ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.

ಇದೀಗ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

 

ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆರೋಪಿ ನಂಬರ್​ 1 ಆಗಿದ್ದಾರೆ. ಜೆಡಿಎಸ್​ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಆರೋಪಿ ನಂಬರ್​ 2 ಆಗಿದ್ದಾರೆ. ಜೆಡಿಎಸ್​ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್​ 3 ಆಗಿದ್ದಾರೆ.

ದೂರಿನಲ್ಲಿರುವಂತೆ ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದು, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್​ಐಆರ್​ ದಾಖಲಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ