ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಡಿ. 9ರಿಂದ ಬೆಳಗಾವಿ ಜಂಟಿ ಅಧಿವೇಶನ ಪ್ರಾರಂಭವಾಗುವ ಸಾಧ್ಯತೆ ಇದೆ.
ಜತೆಗೆ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಒಬಾಮಾ ಅವರೇ ನೆರವೇರಿಸುವ ಸಾಧ್ಯತೆ ಇದೆ. ಭಾಗವಹಿಸುವ ಕುರಿತಂತೆ ಒಬಾಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
Laxmi News 24×7