ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದ ರೈತ ಮಹಿಳೆ ಮೋಹಿನಿ (65) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಭತ್ತ, ಶುಂಠಿ ಬೆಳೆ ಹಾನಿಯಾಗಿತ್ತು. ಸಹಕಾರ ಸಂಘದಲ್ಲಿ ಮಾಡಿದ ಸಾಲ ತಿರುವಳಿ ಮಾಡುವ ಕುರಿತು ಖಿನ್ನತೆಗೆ ಒಳಗಾಗಿದ್ದರು.
ಸೋಮವಾರ ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಮೃತಪಟ್ಟಿದ್ದಾರೆ.
ತಳಲೆ ಸಹಕಾರ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಸಂಘದ ಸ್ವಸಹಾಯ ಸಂಘ ಮತ್ತು ಖಾಸಗಿ ಸೇರಿ ಒಟ್ಟು ₹ 7 ಲಕ್ಷ ಸಾಲ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಗ ನೀಡಿದ ದೂರಿನ ಅನ್ವಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7