Breaking News

ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

Spread the love

ಲಬುರಗಿ: ರಾಷ್ಟ್ರೀಯ ಹೆದ್ದಾರಿ ಕಲಬುರಗಿ- ಜೇವರ್ಗಿ ನಡುವಿನ ಫರಹತಾಬಾದ್ ನ ಖಣಿ ಬಳಿ ನ.5ರ ಮಂಗಳವಾರ ರಾತ್ರಿ ಕಾರು ಹಾಗೂ ಪಿಕಪ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಕಾರು ಹಾಗೂ ಪಿಕಪ್ ನಲ್ಲಿದ್ದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಕಲಬುರಗಿ ನಗರದ ಜನತಾ ಲೇಔಟ್‌ ನ ನಿವಾಸಿ ಮುರುಗೇಶ ಚಂದ್ರಶೇಖರ ಉಪ್ಪಿನ (42) ಹಾಗೂ ಶಹಾಬಾದ್ ನ ನಿವಾಸಿ ಧೂಳಮ್ಮ ಯಮನಪ್ಪ ಪೂಜಾರಿ ( 60) ಮೃತಪಟ್ಟವರು.

ಇತರ 6-7 ಜನ ಗಾಯಗೊಂಡಿದ್ದಾರೆ. ಅಪಘಾತದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ.

ಮುರುಗೇಶ ಅವರು ಜೇವರ್ಗಿಯಿಂದ ಕಲಬುರಗಿ ಕಡೆಗೆ ಕಾರಿನಲ್ಲಿ‌ಬರುತ್ತಿದ್ದಾಗ ಹಾಗೂ ಹೊಲದಲ್ಲಿ ಹತ್ತಿ ಬಿಡಿಸಿ ವಾಪಸ್ ಪಿಕಪ್ ನಲ್ಲಿ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ‌

ಘಟನಾ ಸ್ಥಳಕ್ಕೆ ಕಲಬುರಗಿ ಸಂಚಾರಿ- 2 ವಿಭಾಗದ ಇನ್ಸ್ ಪೆಕ್ಟರ್ ಮಹಾಂತೇಶ ಪಾಟೀಲ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.‌


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ