ನವದೆಹಲಿ : ಮಧ್ಯಮ ವರ್ಗ ಅಥವಾ ಆರ್ಥಿಕವಾಗಿ ದುರ್ಬಲ ಜನರು ಹಣಕಾಸಿನ ಅಡಚಣೆಗಳಿಂದ ತಮ್ಮ ಅಧ್ಯಯನವನ್ನ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ಕನಸುಗಳನ್ನ ಈಡೇರಿಸಿಕೊಳ್ಳಲು ವಿಫಲರಾಗುತ್ತಾರೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಬುಧವಾರ, ಸಚಿವ ಸಂಪುಟವು ಪ್ರಧಾನಮಂತ್ರಿ ವಿದ್ಯಾ ಲಕ್ಷ್ಮಿ ಶಿಕ್ಷಣ ಯೋಜನೆ ಎಂಬ ಯೋಜನೆಗೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಕುಟುಂಬದ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ 3 ಶೇಕಡಾ ಬಡ್ಡಿ ಸಬ್ಸಿಡಿ ಅಡಿಯಲ್ಲಿ ಶಿಕ್ಷಣಕ್ಕಾಗಿ 10 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯನ್ನ ಅನುಮೋದಿಸಿಲಾಗಿದೆ. ಪ್ರಧಾನಮಂತ್ರಿ ವಿದ್ಯಾ ಲಕ್ಷ್ಮಿ ಶಿಕ್ಷಣ ಯೋಜನೆಯಡಿ, ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕಾಗಿ ಯಾವುದೇ ಗ್ಯಾರಂಟಿ ಇಲ್ಲದೆ ಸುಲಭವಾಗಿ ಸಾಲವನ್ನ ಪಡೆಯುತ್ತಾರೆ. ಈ ಸಾಲವು ಸಂಪೂರ್ಣವಾಗಿ ಡಿಜಿಟಲ್ ಮಾಧ್ಯಮದ ಮೂಲಕ ಇರುತ್ತದೆ.