Breaking News

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆ

Spread the love

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆ

ಮಹಿಳೆಯರ ಮೇಲಿನ ದೌರ್ಜನ್ಯತಡೆಗಟ್ಟಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಬೆಳಗಾವಿ : ಮಹಿಳೆಯರ ಸುರಕ್ಷತೆ-ಸಬಲೀಕರಣಕ್ಕೆ ವಿಶೇಷ ಗಮನ ನೀಡಬೇಕು. ಮಹಿಳಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ (ನ.06) ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ/ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು. ನ್ಯಾಯಾಲಯ ಹಂತದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಕ್ಕೆ ಕೂಡಲೇ ಕ್ರಮ ವಹಿಸಬೇಕು ಎಂದು ಹೇಳಿದರು.

ಸಖಿ ಒನ್ ಸ್ಟಾಫ್ ಸಹಾಯವಾಣಿ ಸಂಖ್ಯೆ ನಿರಂತರ ಚಾಲ್ತಿಯಲ್ಲಿರಬೇಕು. ಮಹಿಳೆಯರಮೇಲಾಗುತ್ತಿರುವ ದೌರ್ಜನ್ಯ ತಡೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಬೆಂಬಲ ತೆಗೆದುಕೊಳ್ಳಬೇಕು ಎಂದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕರೆ ಮಾಡಲು ಸಖಿ ಒನ್ ಸ್ಟಾಫ್ ಸಹಾಯವಾಣಿ ಸಂಖ್ಯೆ ನಿರಂತರ ಚಾಲ್ತಿಯಲ್ಲಿರುವಂತೆ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು. ಭದ್ರತೆ, ಉದ್ಯೋಗ, ಶೈಕ್ಷಣಿಕ ಸೌಲಭ್ಯ, ಚಿಕಿತ್ಸೆ ಕಲ್ಪಿಸುವಂತೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿರಾಶ್ರಿತ ಕೇಂದ್ರಗಳಲ್ಲಿ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಪೊಲೀಸ್ ಇಲಾಖೆಯಿಂದ ಉಲ್ಲೇಖ ಪತ್ರ ನೀಡಲಾಗುವುದು ಅದರ ಅನ್ವಯ ವಸತಿ ಸೌಲಭ್ಯ ನೀಡಬೇಕು. ಒಂದುವೇಳೆ ಆಶ್ರಯ ಕೇಂದ್ರಗಳಲ್ಲಿ ಯಾವುದೇ ರೀತಿಯ ತೊಂದರೆ ಎದುರದಲ್ಲಿ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಬೇಕು. ಅದೇ ರೀತಿಯಲ್ಲಿ ಅಂತಹ ಸೂಕ್ಷ್ಮ ಪ್ರಕರಣಗಳು ಇದ್ದಲ್ಲಿ, ಪೊಲೀಸ್ ಭದ್ರತೆ ಕೂಡ ಒದಗಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆ ಕಡ್ಡಾಯ:

ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ ತಾಲೂಕುಗಳಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳಾ ದೌರ್ಜನ್ಯ ನಿಯಂತ್ರಣ ಸಮಿತಿಯ ಸಭೆಗಳಾಗುತ್ತಿವೆ. ಆದರೆ ಸವದತ್ತಿ, ಹುಕ್ಕೇರಿ, ಖಾನಾಪೂರ ತಾಲೂಕಿನಲ್ಲಿ ನಿಯಮಾನುಸಾರ ಸಭೆಗಳು ಆಗಬೇಕಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಆಯೋಜನೆ ಮಾಡಬೇಕು ಎಂದು ತಿಳಿಸಿದರು.

ಅಗತ್ಯವಿರುವ ಪ್ರದೇಶಗಳ ಶಾಲಾ ಕಾಲೇಜುಗಳಲ್ಲಿ ಜಾಗೃತಿ, ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು.
ವಿದ್ಯಾರ್ಥಿನಿಯ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದೆ. ಕುಡಿಯುವ ನೀರು, ಶೌಚಾಲಯ ಸ್ವಚ್ಚತೆ, ಕಿಟ್ ವಿತರಣೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಸಖಿ ಒನ್ ಸ್ಟಾಫ್ ಸೆಂಟರ್ ಮೂಲಕ ಕಾನೂನು ಸಲಹೆ, ಆಪ್ತ ಸಮಾಲೋಚಕರಿಂದ ಸಮಾಲೋಚನೆ, ಸಖಿ ಕೇಂದ್ರದ ಕುರಿತು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳಾಗುತ್ತಿವೆ ಎಂದು ಅಧಿಕಾರಿಗಳು ವಿವರಿಸಿದರು.

ಎನ್.ಜಿ. ಓ ಸಂಸ್ಥೆಗಳಲ್ಲಿ ಪೋಲಿಸ್ ಪ್ರಕರಣಗಳ ಮೂಲಕ ತಾತ್ಕಾಲಿಕವಾಗಿ ಉಳಿದುಕೊಳ್ಳಲು ನಿರಾಶ್ರಿತ ಮಹಿಳೆಯರನ್ನು ಆಧಾರ್ ಕಾರ್ಡ್ ಮಾಹಿತಿ ಪಡೆದು ಪ್ರವೇಶ ನೀಡಲಾಗುವುದು.
ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸೌಲಭ್ಯ ಅಗತ್ಯವಿದೆ ಎಂದು ಎನ್.ಜಿ.ಓ ಸಂಸ್ಥೆಯ ನಿರ್ವಾಹಕರು ಹೇಳಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ ಬಸರಗಿ, ಪ್ರೊಬೇಷನರಿ ಐಎಎಸ್ ದಿನೇಶ್ ಕುಮಾರ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಎಸಿಪಿ ಸದಾಶಿವ ಕಟ್ಟಿಮನಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಅಬ್ದುಲ್ ರಶೀದ್ ಮಿರಜನ್ನವರ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಎನ್.ಜಿ.ಒ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ತಿತರಿದ್ದರು.


Spread the love

About Laxminews 24x7

Check Also

ಅಥಣಿ ಹಾಗೂ ಕಾಗವಾಡ ತಾಲೂಕಿನಾದ್ಯಂತ ರೈತ ಕುಟುಂಬದ 1660 ಎಕರೆ ರೈತರ ಜಮೀನು ವಕ್ಪ್ ಆಸ್ತಿ ಎಂದು ಕಬಳಿಕೆಯಾಗಿದೆ,

Spread the loveಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಕಾಗವಾಡ ತಾಲೂಕಿನಾದ್ಯಂತ ರೈತ ಕುಟುಂಬದ 1660 ಎಕರೆ ರೈತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ