ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅತಿಥಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6ರಂದು ಈದು ಗ್ರಾಮದಲ್ಲಿ ಸಂಭವಿಸಿದೆ.
ಮೃತ ಮಹಿಳೆ ಮೂಡಬಿದ್ರೆ ಮೂಲದ ಈದು ಗ್ರಾಮದ ನಿವಾಸಿ ರಾಜೇಶ್ ಅವರ ಪತ್ನಿ ಪ್ರಸನ್ನಾ(29) ಎಂದು ಗುರುತಿಸಲಾಗಿದೆ.
ಇವರು ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.
ಇವರಿಗೆ 10 ತಿಂಗಳ ಹೆಣ್ಣು ಮಗುವಿದ್ದು, ರಾಜೇಶ್ ಅವರು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿ ಯಾಗಿದ್ದರು.
ಕಷ್ಟಪಟ್ಟು ಓದಿದ್ದರೂ ಬೇಗನೇ ಮಗು ಆಗಿರುವ ಕಾರಣದಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಪ್ರಸನ್ನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮನೆಯ ಡೈನಿಂಗ್ ಹಾಲ್ನಿಂದ ಮಾಹಡಿಗೆ ಹೋಗುವ ಮೆಟ್ಟಿಲಿನ ಸ್ಟೀಲ್ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7