Breaking News

ವಕ್ಫ್ ಬೋರ್ಡ್ ರದ್ದುಪಡಿಸಿ; ಬಿಜೆಪಿ ಮಂಡಲದ ವತಿಯಿಂದ ತಹಶೀಲ್ದಾರ್‌ಗೆ ಮನವಿ

Spread the love

ಹುಕ್ಕೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವಕ್ಫ್ ಬೋರ್ಡ್ ಮೂಲಕ ಕಬಳಿಸುತ್ತಿರುವ ಜಮೀನು ಸೇರಿದಂತೆ ವಿವಿಧ ಆಸ್ತಿಗಳ ಕಬಳಿಕೆ ಯತ್ನ ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ಕೋರ್ಟ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುಳಾ ನಾಯಿಕ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.‌

ಪ್ರತಿಭಟನೆ ಉದ್ದೇಶಿಸಿ ಬಿಜಿಪಿ ಮಂಡಲ ಅಧ್ಯಕ್ಷ ರಾಚಯ್ಯ ಹಿರೇಮಠ ಮಾತನಾಡಿ, ‘ಕರ್ನಾಟಕದಲ್ಲಿ ವಕ್ಫ್ ಕಾಯ್ದೆಯ ದುರ್ಬಳಕೆಯಿಂದ ಎಲ್ಲರೂ ಆತಂಕದಲ್ಲಿದ್ದಾರೆ. ಹಿಂದೆ ಕಾಂಗ್ರೆಸ್‌ನವರು ಮುಸ್ಲಿಂ ತುಷ್ಠಿಕರಣಕ್ಕಾಗಿ ಮತಗಳಿಕೆ ಆಸೆಯಿಂದ ರೂಪಿಸಲಾದ ವಕ್ಫ್ ಬೋರ್ಡ್‌ನ್ನು ರದ್ದುಪಡಿಸಬೇಕು’ ಎಂದರು.

ಮುಖಂಡರಾದ ಸತ್ಯಪ್ಪ ನಾಯಿಕ, ರಾಜು ಮುನ್ನೋಳಿ, ಗುರುರಾಜ ಕುಲಕರ್ಣಿ, ಪ್ರಭಾಕರ ಹಂಚಿನಾಳ, ರಾಹುಲ್ ಕೋರಿ, ರಾಜು ಬಿರಾದಾರ ಪಾಟೀಲ್, ಸುಚಿತ ಪಾಟೀಲ್, ಸಂಗಮೇಶ ದುರದುಂಡಿ, ದುರದುಂಡಿ ಪಾಟೀಲ ಇದ್ದರು.


Spread the love

About Laxminews 24x7

Check Also

ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (

Spread the loveಬೆಂಗಳೂರು, ಜುಲೈ 1: ‘ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (BR Patil) ಆಡಿದ್ದ ಅಬ್ಬರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ