ಬೆಂಗಳೂರು, ನವೆಂಬರ್ 09: ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತಿನಿ. ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು ನಾನು ಬಂದಿದ್ದೀನಿ. ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ. ಮೊಮ್ಮಗ ನಿಖಿಲ್ ಗೆದ್ದ ಮೇಲೆಯೂ ನಾನು ಮನೆಯಲ್ಲಿ ಮಲಗಲ್ಲ.
ಆಮೇಲೆ ಕೂಡ ಹೋರಾಟ ಪಕ್ಷ ಕಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು.
ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು, ನಮ್ಮ ವಂಶ ಬಡತನದಿಂದ ಕಷ್ಟಸುಖ ಅರಿತು ಮೇಲೆ ಬಂದಿದೆ. ನಮ್ಮ ವಂಶಕ್ಕೆ ಈ ಕಣ್ಣೀರು ಬಳುವಳಿಯಾಗಿ ಬಂದಿದೆ ಎಂದರು.