Breaking News

ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ:ಲಕ್ಷ್ಮಣ ಸವದಿ

Spread the love

ರಾಯಚೂರು: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಹಳ್ಳಿಯಿಂದ ದಿಲ್ಲಿಯ ವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ  ಬಿಜೆಪಿ ಸದಸ್ಯರ ಆಯ್ಕೆಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಮಸ್ಕಿ  ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸೂರ್ಯ- ಚಂದ್ರರಿವುದು ಎಷ್ಟು ಸತ್ಯವೋ, ಮುಂಬರುವ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರತಾಪ್‌ಗೌಡ ಅವರ ಗೆಲ್ಲವುವುದು ಅಷ್ಟೆ ಸತ್ಯ.  ಮಸ್ಕಿ ಉಪ ಚುನವಣೆಗೂ ಮುನ್ನ ನೀರಾವರಿಯ ಎಲ್ಲಾ ಯೋಜನೆಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು, ನೀರಾವರಿ ಹೋರಾಟಗಾರರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ