Breaking News

ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ. ಲಕ್ಷ್ಮಣ ಸವದಿ

Spread the love

ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ಯತ್ನಾಳ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಮೂರು ತಂಡಗಳ ನಡುವೆ ತಿಕ್ಕಾಟ ಪ್ರಾರಂಭವಾಗಿದೆ.

ಪಕ್ಷದಲ್ಲಿ ಗುಂಪುಗಾರಿಕೆ ತೀವ್ರಗೊಂಡಿದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿಯಲ್ಲಿ ದೊಡ್ಡ ಬದಲಾವಣೆ ಆಗಲಿದೆ‌ ಎಂದರು.

ಬಿಜೆಪಿಯ ಹತ್ತಾರು ಶಾಸಕರು ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತು ಚರ್ಚೆ ನಡೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರುವವರು ಸನ್ಯಾಸಿಗಳಲ್ಲ. ಇಲ್ಲಿಗೆ ಬಂದ ಮೇಲೆ ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕಾಗುತ್ತದೆ. ಈ ಕುರಿತು ಪಕ್ಷದ ವರಿಷ್ಠರ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ