Breaking News

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ

Spread the love

ಬೆಂಗಳೂರು : ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಹೂವಿನ ಕುಂಡದಲ್ಲಿ ಗಾಂಜಾ ( Marijuana ) ಗಿಡ ಬೆಳೆಸಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಊರ್ಮಿಳಾ ಮತ್ತು ಗುರುಂಗ್ ಎಂಬ ದಂಪತಿ ವಿರುದ್ಧ ವಿರುದ್ಧ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

54 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಊರ್ಮಿಳಾ ಮನೆಯ ಬಾಲ್ಕನಿಯಲ್ಲಿ ರೀಲ್ಸ್​ ಮಾಡಿ ಪೋಸ್ಟ್ ಮಾಡಿದ್ದಳು. ಊರ್ಮಿಳಾ ಮಾಡಿದ್ದ ರೀಲ್ಸ್​ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದೆ. ಗಾಂಜಾ ಗಿಡ ಕುರಿತು ವ್ಯಕ್ತಿಯೋರ್ವ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಹೂವಿನ ಗಿಡಗಳ ಮಧ್ಯೆ ದಂಪತಿ ಗಾಂಜಾ ಗಿಡ ಬೆಳೆಸಿದ್ದರು. 54 ಗ್ರಾಂ ಗಾಂಜಾ ಸೊಪ್ಪನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಎಸ್‌ಆರ್‌ ನಗರದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ದಂಪತಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ