ಬೆಳಗಾವಿ: ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಸಚಿವ ಸ್ಥಾನ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಲಸಿಗರು ಹಾಗೂ ಮೂಲ ಬಿಜೆಪಿಗರ ಮಧ್ಯೆ ಯಾವುದೇ ತಿಕ್ಕಾಟವಿಲ್ಲ. ಬಿಜೆಪಿಯಲ್ಲಿನ ತಿಕ್ಕಾಟ ಇದು ಮಾಧ್ಯಮಗಳ ಸೃಷ್ಟಿ ಎಂದರು.
ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿ, ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಮುಂದಿನ ಅವಧಿ ವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದ ಅವರು, ಬೆಳಗಾವಿ ಲೋಕಸಭೆಗೆ ತಾವು ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಈ ಬಗ್ಗೆ ಯಾರು ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದರು.
Laxmi News 24×7